ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ



(ನ್ಯೂಸ್‌ ಕಡಬ) newskadaba.com,  ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.







ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.






ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ ಸಮರ್ಪಣೆಯಾಗಿದೆ. ಸಮಯ ಜಟಿಲವಾಗಿತ್ತು, ವಿಳಂಬವಾಗಿರಬಹುದು ಆದರೆ ಹೈಕಮಾಂಡ್ ನನ್ನನ್ನು ನಿರಾಕರಿಸಿಲ್ಲ. ಇದು ಕೇವಲ ಶಿವಕುಮಾರ್ ಒಬ್ಬನ ಸಾಧನೆಯಲ್ಲ. ಕಾಂಗ್ರೆಸ್ ಇತಿಹಾಸ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಸಾವಿರಾರು ಕಾರ್ಯಕರ್ತರ ಶ್ರಮದ ಫಲ” ಎಂದಿದ್ದಾರೆ.

“ಗಾಂಧಿ-ನೆಹರು ಕುಟುಂಬಕ್ಕೆ ನಿಷ್ಠರಾಗಿರುವುದು ತಮ್ಮ ಕರ್ತವ್ಯ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ತ್ಯಾಗವನ್ನು ಕೊಂಡಾಡಿದ್ದಾರೆ. ಅಲ್ಲದೆ, ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆ ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದಲ್ಲಿ ಹೊಸ ಯುವಯುಗ ಹಾಗೂ ನವಯುಗ ಆರಂಭಿಸುತ್ತೇನೆ” ಎಂದು ಭರವಸೆ ನೀಡಿದರು.

error: Content is protected !!
Scroll to Top