ರೂಪಾಯಿ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ಉಪನ್ಯಾಸ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 03. ಮಂಗಳೂರು ವಿಶ್ವವಿದ್ಯಾನಿಲಯ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ((The problem of the Rupee, Its contemporary Sifnificance) ಉಪನ್ಯಾಸ ಕಾರ್ಯಕ್ರಮ  ಜೂನ್ 3 ರಂದು 10:30 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.







 

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






error: Content is protected !!
Scroll to Top