ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ



(ನ್ಯೂಸ್‌ ಕಡಬ) newskadaba.com,  ಜೂ.03 :  ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಇಂದು ಪದಗ್ರಹಣ; ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ







ಸುಬ್ರಹ್ಮಣ್ಯ, ಜೂ. 3: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನೆರವೇರಿಸಲಾಯಿತು.






 

ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತ್ತುಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣಾ ಮರುವಂಜ, ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗಣೇಶ್ ಕೈಕುರೆ ಸೇರಿದಂತೆ ಮುಖಂಡರಾದ ವೆಂಕಟ್ರಮಣ ಪಾಂಗ, ಭವಾನಿ ಶಂಕರ್, ಸುಬ್ರಮಣ್ಯ ಭಟ್, ಗೋಪಾಲ್ ಎಣ್ಣೆಮಜಲು ಹಾಗೂ ಇತರರು ಉಪಸ್ಥಿತರಿದ್ದರು.

ನೂತನ ಮುಖ್ಯಮಂತ್ರಿಯ ಪದಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ, ಜನಕಲ್ಯಾಣ ಮತ್ತು ಸುಶಾಸನಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

error: Content is protected !!
Scroll to Top