(ನ್ಯೂಸ್ ಕಡಬ) newskadaba.com, ಜೂ.03 ತೆಹ್ರಾನ್/ಕುವೈತ್,:ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇರಾನ್ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹೊರಬಿದ್ದಿವೆ. ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ, ಅಮೆರಿಕ ಸೇನೆ ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ತನ್ನ ನೆಲೆಗಳ ಮೇಲೆ ಯಾವುದೇ ಯಶಸ್ವಿ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಕುವೈತ್‌ನ ಹಲವು ಪ್ರದೇಶಗಳಲ್ಲಿ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ.
ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಯು ಶತ್ರುಗಳ ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಹೇಳಿದ್ದು, ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಅಮೆರಿಕದ ಡ್ರೋನ್‌ನ್ನು ಇರಾನ್ ಹೊಡೆದುರುಳಿಸಿದ ಘಟನೆಯ ಬಳಿಕ ಎರಡೂ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತಾರಕಕ್ಕೇರಿದೆ.









