ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಜೂ. 03. ಕರ್ನಾಟಕ ರಾಜಕಾರಣದಲ್ಲಿ ಬಹುನಿರೀಕ್ಷಿತ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ “ಟ್ರಬಲ್ ಶೂಟರ್” ಖ್ಯಾತಿಯ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಡಿ.ಕೆ.ಶಿವಕುಮಾರ್ ಪ್ರಮಾಣವಚನ ಬೋಧಿಸಿದರು.

Scroll to Top