ಡಿಕೆಶಿಗೆ ಅಧಿಕಾರವೇ ಇಲ್ಲ, ಇದು ರಿಮೋಟ್ ಕಂಟ್ರೋಲ್‌ ಸರ್ಕಾರ; ಹೆಚ್ಚು ದಿನ ಉಳಿಯಲ್ಲ- JDS ನಾಯಕ ಶರವಣ ಭವಿಷ್ಯ



(ನ್ಯೂಸ್‌ ಕಡಬ) newskadaba.com ಜೂ.06: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಖಾತೆ ಹಂಚಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಒಳಜಗಳದ ಕಾರಣದಿಂದ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಟೀಕಿಸಿದ್ದಾರೆ.







ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದರು. ಅಲ್ಲದೆ, ಮುನಿಯಪ್ಪ ಕೂಡ ತಮ್ಮ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದನ್ನೂ ಅವರು ಉಲ್ಲೇಖಿಸಿದರು.






ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಚಿವ ಸಂಪುಟ ಸಂಕಷ್ಟದಲ್ಲಿ ಸಿಲುಕಿದೆ. ಇದರಿಂದ ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ ಎಂದು ವ್ಯಂಗ್ಯವಾಡಿದರು.ಇದೇ ವೇಳೆ ಸಚಿವ ಖಾತೆ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗೆ ಯಾವುದೇ ಸ್ವತಂತ್ರವಿಲ್ಲ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಅಧಿಕಾರ ನೀಡಿಲ್ಲ ಎಂದು ಟೀಕಿಸಿದರು.

error: Content is protected !!
Scroll to Top