ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ವತಿಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ.

ಅಮೆರಿಕದ ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಹಾಗೂ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರು ಪ್ರತಿಭಟನೆಯ ಮುಂದಾಳತ್ವ ವಹಿಸಲು ದೆಹಲಿಗೆ ಆಗಮಿಸಿದ್ದಾರೆ.ಪ್ರಸಿದ್ಧ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಚಳವಳಿಗೆ ಮತ್ತಷ್ಟು ತೀವ್ರತೆ ಬಂದಿದೆ.

“ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಧ್ವನಿಯನ್ನು ಎತ್ತಿಹಿಡಿಯಲು ನಾನು ಶಾಶ್ವತವಾಗಿ ಭಾರತಕ್ಕೆ ಮರಳುತ್ತಿದ್ದೇನೆ. ಬಂಧನಕ್ಕೆ ಹೆದರುವುದಿಲ್ಲ; ಈ ಚಳವಳಿಯನ್ನು ಶಾಂತಿ ಮತ್ತು ಪ್ರೀತಿಯಿಂದ ಮುನ್ನಡೆಸಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Scroll to Top