ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 08. ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಜೂನ್ 8 ರಿಂದ 10 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೂನ್ 10 ರವರೆಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಉಭಯ ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಈಗಾಗಲೇ ಸಾಧಾರಣ ಮಳೆಯಾಗಿದ್ದು, ಮೋಡಕವಿದ ವಾತಾವರಣ ಮುಂದುವರಿದಿದೆ. ಸಾರ್ವಜನಿಕರು ಮತ್ತು ತಗ್ಗು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತ ವಿನಂತಿಸಿದೆ.

Scroll to Top