ಕಾಂಗ್ರೆಸ್ ಮುಖಂಡ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

(ನ್ಯೂಸ್ ಕಡಬ) newskadaba.com,  ಜೂ.08  ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ (55) ಅವರು ಭಾನುವಾರ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾದ ಇವರು, ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಪ್ರವೇಶಿಸಿದ್ದರು. ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪಕ್ಷದ ನಿಷ್ಠಾವಂತ ಹಾಗೂ ಪ್ರಬಲ ನಾಯಕರಾಗಿದ್ದರು.

ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

.

Scroll to Top