(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯ ಸರ್ಕಾರವು ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಹಲವು ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರನ್ನು ನೂತನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಇವರು ಲಾಭು ರಾಮ್ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಸಿಎಂ ಕಚೇರಿಯಲ್ಲಿ ಹೊಸದಾಗಿ ಸೃಷ್ಟಿಸಲಾದ ‘ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನಾ ಅನುಷ್ಠಾನ)’ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ದೀಪಾ ಚೋಳನ್ ಅವರನ್ನು ಸಾರಿಗೆ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.













