ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ



(ನ್ಯೂಸ್ ಕಡಬ) newskadaba.com ಕಡಬ, ಜೂ. 08. ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯುಕ್ತವಾಗಿ ನೆರವೇರಿಸಲಾಯಿತು.







ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿಸೋಜ ಅವರು ಅಧ್ಯಕ್ಷತೆ ವಹಿಸಿ ಪರಿಸರ ಜಾಗೃತಿ ಕುರಿತು ಮಾತನಾಡಿದರು. ಪರಿಸರ ಸರ್ವ ಜೀವಿಗಳ ಆಶ್ರಯತಾಣವಾಗಿದೆ, ವಿದ್ಯಾರ್ಥಿ ದೆಸೆಯಲ್ಲಿ ಪರಿಸರದ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಸ್ವಸ್ಥ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದರು.






ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣಾ ಗೀತೆ, ಭಾಷಣ ಹಾಗೂ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ ನಡೆಯಿತು.  ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ಕಾಲೇಜಿನ ಪ್ರಾಂಶುಪಾಲರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಲತಾ ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಉಪಸ್ಥಿತರಿದ್ದರು.

ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ವಿದ್ಯಾರ್ಥಿನಿ ಸುದೀಕ್ಷಾ ಸ್ವಾಗತಿಸಿ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಹರ್ಷಿ ರೈ ವಂದಿಸಿದರು. ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿನಿ ಶ್ರಾವ್ಯ ಎಂ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top