ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ!



(ನ್ಯೂಸ್ ಕಡಬ) newskadaba.com ಜೂ. 08. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಇದೀಗ ಅಕ್ಕಿ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿ ಬೆಲೆ ಪ್ರತಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.







ಕೇಂದ್ರ ಸರ್ಕಾರವು ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅನುಮತಿ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಗಣನೀಯವಾಗಿ ಕುಸಿದಿದೆ.






ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಮಾರುಕಟ್ಟೆಯಲ್ಲಿ ಅಕ್ಕಿ ಕೊರತೆ ಮುಂದುವರಿಯಲಿದ್ದು, ಮುಂಬರುವ ದಿನಗಳಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗುವ ಆತಂಕ ಗ್ರಾಹಕರಲ್ಲಿ ಸೃಷ್ಟಿಯಾಗಿದೆ.

error: Content is protected !!
Scroll to Top