ರಾಜ್ಯಸಭೆ, ಎಂ.ಎಲ್.ಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳಿಸಿದ ಬಿಜೆಪಿ..!



(ನ್ಯೂಸ್ ಕಡಬ) newskadaba.com ಜೂ. 08. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಕೆಲವು ಪ್ರಮುಖ ನಾಯಕರಿಗೆ ಅವಕಾಶ ಕೈತಪ್ಪಿದಂತಾಗಿದೆ.







ಬಿಜೆಪಿ ತನ್ನ ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ಮಾಜಿ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಘೋಷಿಸಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ.






ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರಿಗೆ ಈ ಬಾರಿಯೂ ರಾಜ್ಯಸಭೆ ಟಿಕೆಟ್ ಕೈ ತಪ್ಪಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆ ಅಂತಿಮವಾಗಿ ಸಾಕಾರವಾಗಿಲ್ಲ. ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಈ ಬಾರಿ ಟಿಕೆಟ್ ದೊರಕಿಲ್ಲ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಿರಿಯ ನಾಯಕರಿಗೆ ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೈಕಮಾಂಡ್ ಹೊಸ ಮುಖಗಳಿಗೆ ಮಣೆ ಹಾಕುವ ಮೂಲಕ ಸಂಘಟನೆಗೆ ಆದ್ಯತೆ ನೀಡಿದೆ ಎನ್ನಲಾಗಿದೆ.

error: Content is protected !!
Scroll to Top