(ನ್ಯೂಸ್ ಕಡಬ) newskadaba.com ಜೂ. 08. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇವಲ ಮಂತ್ರಿ ಕುರ್ಚಿಗಾಗಿ ತಮ್ಮ ತಂದೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಆಗುತ್ತಿರುವ ನಿರಂತರ ಅಪಮಾನಗಳನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಹೆಚ್.ಡಿ. ದೇವೇಗೌಡರಿಗೆ ಎನ್ಡಿಎ ಟಿಕೆಟ್ ನಿರಾಕರಿಸಿ, ಬಿಜೆಪಿಯ ಸಾಮಾನ್ಯ ನಾಯಕ ಎಂ. ನಾಗರಾಜ ಅವರಿಗೆ ಮಣೆ ಹಾಕಿರುವುದನ್ನು ಸುರ್ಜೇವಾಲ ಪ್ರಶ್ನಿಸಿದ್ದಾರೆ.
ಹಿಂದೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಕಾಂಗ್ರೆಸ್ ಪಕ್ಷವು ದೇವೇಗೌಡರನ್ನು ಗೌರವಿಸಿ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆ ಮಾಡಿತ್ತು. ಆದರೆ ಇಂದು ಯಾವುದೇ ಬೆಲೆ ತೆತ್ತಾದರೂ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಒಂದೇ ಕಾರಣಕ್ಕೆ ಬಿಜೆಪಿ ಮಾಡುತ್ತಿರುವ ಅವಮಾನಗಳನ್ನು ಜೆಡಿಎಸ್ ಸಹಿಸಿಕೊಳ್ಳುತ್ತಿದೆ. ಕುರ್ಚಿ ಉಳಿಸಿಕೊಳ್ಳುವುದೇ ಜೆಡಿಎಸ್ನ ಏಕೈಕ ಸಿದ್ಧಾಂತವಾಗಿದೆ” ಎಂದು ಅವರು ಟೀಕಿಸಿದ್ದಾರೆ.













