(ನ್ಯೂಸ್ ಕಡಬ) newskadaba.com, ಜೂ.09 :ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆ ನೀಡಬೇಕೆಂದು ಆಗ್ರಹಿಸಿ ಹೊಸಪೇಟೆ ಮತ್ತು ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ.
ಹೊಸಪೇಟೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಮತ್ತು ಶಿರಾಳಕೊಪ್ಪದಲ್ಲಿ ಜಮೀರ್ ಅಭಿಮಾನಿ ಬಳಗ ಪ್ರತಿಭಟನೆಯ ನೇತೃತ್ವ ವಹಿಸಿದ್ದವು. ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿರುವ ಜಮೀರ್ ಅಹಮದ್ ಅವರಿಗೆ ಸೂಕ್ತ ಸ್ಥಾನಮಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಈ ಕುರಿತು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.













