ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ



(ನ್ಯೂಸ್ಕಡಬ) newskadaba.com ಕಡಬ, ಜೂ. 09. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು, ಕಡಬ ಇದರ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜಂಟಿಯಾಗಿ ನೆರವೇರಿತು.







ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಪತ್ರಕರ್ತರಾದ ನಾಗರಾಜ್ ಎನ್ ಕೆ ಆಗಮಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವವನ್ನು ವಹಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಶಿಸ್ತಿನ ನಾಯಕರಾಗಿ ಹೊರಹೊಮ್ಮಲು ಸಾಧ್ಯ ಎಂಬುದನ್ನು ಹಲವು ಮಹಾನ್ ವ್ಯಕ್ತಿಗಳು ಸಾಧಿಸಿ ತೋರಿಸಿದ್ದಾರೆ, ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಗೊಳಿಸಿಕೊಂಡು ಹಾಗೂ ಸಮುದಾಯಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಹೆತ್ತವರಿಗೆ ಮತ್ತು ಸಂಸ್ಥೆಗೆ ಕೀರ್ತಿ ತರಲು ಈ ವಿದ್ಯಾರ್ಥಿ ಸಂಘಟನೆ ಪೂರಕವಾಗಿದೆ ಎಂದು ಹೇಳಿ ಅವರು ಶುಭ ಹಾರೈಸಿದರು.






ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿಸೋಜಾ ವಹಿಸಿ, ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ ಶುಭ ಹಾರೈಸಿದರು. ವಿದ್ಯಾರ್ಥಿ ಜೀವನದಲ್ಲಿ ಐಕ್ಯತಾ ಮನೋಭಾವನೆ ಮತ್ತು ಸಾಮರಸ್ಯದ ಮನೋಭಾವನೆಯನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿ ಸಂಘಟನೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ತಮಗೆ ದೊರಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಂಸ್ಥೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಶುಭ ಹಾರೈಸಿದರು.

ಸೈಂಟ್ ಜೋಕಿಮ್ಸ್ ಕಾಲೇಜಿನ ಪ್ರಾಚಾರ್ಯರಾದ ಕಿರಣ್ ಕುಮಾರ್ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ನಾಯಕ ಕಾರ್ತಿಕ್,  ಉಪನಾಯಕ ತೌಹಿದ್ ಹಾಗೂ ಇತರ ಪದಾಧಿಕಾರಿಗಳು ಪ್ರಮಾಣವಚನ ಸ್ವೀಕರಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ರಾಜೇಶ್ ಎನ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾಲೇಜು ವಿದ್ಯಾರ್ಥಿನಿ ದಿಯಾ ಮನೋಜ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಫಾತಿಮತ್ ನಿಶ್ಮ ಸ್ವಾಗತಿಸಿ, ಜೋಶ್ವಿ ಪಿ.ವಿ ವಂದಿಸಿದರು.

error: Content is protected !!
Scroll to Top