ನೆಹರೂ ದಾಖಲೆ ಬ್ರೇಕ್ ಭಾರತದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ!

(ನ್ಯೂಸ್‌ ಕಡಬ) newskadaba.com,  ಜೂ.10: ಪ್ರಧಾನಿ ನರೇಂದ್ರ ಮೋದಿ ಅವರು ಸತತ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ‘ನಿರಂತರ’ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4,398 ದಿನಗಳ (1952-1964) ಆಡಳಿತದ 64 ವರ್ಷಗಳ ಹಳೆಯ ದಾಖಲೆಯನ್ನು ಮೋದಿ ಮುರಿದಿದ್ದಾರೆ.

“ಕಳೆದ 12 ವರ್ಷಗಳ ಈ ಪಯಣ ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಸಮರ್ಪಿತವಾಗಿದೆ” ಎಂದು ಪ್ರಧಾನಿ ಮೋದಿ ‘ಎಕ್ಸ್’ ಖಾತೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಐತಿಹಾಸಿಕ ಸಾಧನೆಗೆ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಸೇರಿದಂತೆ ಹಲವು ಜಾಗತಿಕ ಮತ್ತು ದೇಶಿ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

Scroll to Top