ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರಿಗೆ ಗಾಯ, ನಾಲ್ಕು ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಮೇ.22. ಎಲ್‍ಪಿಜಿ ಸಿಲಿಂಡರೊಂದು ಸ್ಫೋಟಗೊಂಡ ಪರಿಣಾಮ ನಾಲ್ಕು ಮನೆಗಳಿಗೆ ಹಾನಿಯಾಗಿ ಕಾರೊಂದು ಜಖಂಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ಮಂಗಳವಾರದಂದು ನಡೆದಿದೆ.


ಇಲ್ಲಿನ ಎಳ್ಳುಪುರ ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ನಾಲ್ಕು ಮನೆಗಳಿಗೆ ಹಾನಿಯಾಗಿದ್ದು, ಹೊರಗಡೆ ನಿಲ್ಲಿಸಲಾಗಿದ್ದ ಸ್ವಿಫ್ಟ್ ಡಿಸೈರ್ ಕಾರು ಜಖಂಗೊಂಡಿದೆ. ಸ್ಫೋಟದ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಸ್ಥಳೀಯ ಆಸ್ವತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಏ.8ರ ನಂತರ BJP ಪಟ್ಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top