ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ



(ನ್ಯೂಸ್ ಕಡಬ) newskadaba.com ಜೂ. 10. ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರದಂದು ನಡೆದಿದೆ.







ಮೃತಪಟ್ಟವರನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಹಾಗೂ ಶೋಭಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗಡಿಯಾರ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ ಎನ್ನಲಾಗಿದೆ.






ಅಪಘಾತದ ಶಬ್ದ ಕೇಳಿ ಧಾವಿಸಿದ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ನಜ್ಜುಗುಜ್ಜಾಗಿದ್ದ ಕಾರಿನೊಳಗೆ ಸಿಲುಕಿದ್ದ ನಾಲ್ವರನ್ನು ಹೊರತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top