ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..!



(ನ್ಯೂಸ್ ಕಡಬ) newskadaba.com ಜೂ. 10. ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.







ಧರ್ಮಸ್ಥಳ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ ಹಾಗೂ ಪ್ರಸ್ತುತ ಅರಸಿನಮಕ್ಕಿ ಗ್ರಾಮದಲ್ಲಿ ಗ್ರಾಮೀಣ ಅಂಚೆ ವಿತರಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್(35) ಎಂಬಾತನ ವಿರುದ್ಧ ಆರೋಪಗಳು ಕಂಡುಬಂದ ಹಿನ್ನೆಲೆ ಜೂನ್ 8ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ, ಬಳಿಕ ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ವಿಚಾರಣೆ ನಡೆಸಿದ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.






ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ., ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿತು.

error: Content is protected !!
Scroll to Top