ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ



(ನ್ಯೂಸ್ಕಡಬ) newskadaba.com, ಜೂ.11 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.







ರಾಜ್ಯದಲ್ಲಿ ಸುಮಾರು 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗೂ ಕಳೆದ ಐದು ತಿಂಗಳಿಂದ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.”ಚುನಾವಣೆಗೂ ಮುನ್ನ ಯಾವುದೇ ಷರತ್ತಿಲ್ಲದೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಬಯೋಮೆಟ್ರಿಕ್ ಹಾಗೂ ಸರ್ವರ್ ನೆಪವೊಡ್ಡಿ ಬಡ ಮಹಿಳೆಯರನ್ನು ಯೋಜನೆಯಿಂದ ಹೊರಗಿಡುತ್ತಿದೆ” ಎಂದು ಜೆಡಿಎಸ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.






ಈ ಕುರಿತು ಸರ್ಕಾರದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲವಾದರೂ, ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆದು ಸರಿಯಾದ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ಪರಿಶೀಲನಾ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..

error: Content is protected !!
Scroll to Top