(ನ್ಯೂಸ್ ಕಡಬ) newskadaba.com, ಜೂ.16 ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಆನ್ಲೈನ್ ವಂಚನೆ ಹಾಗೂ ವದಂತಿಗಳನ್ನು ತಡೆಗಟ್ಟಲು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಮ್ (Telegram) ಸೇವೆಗಳನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.:
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇದನ್ನು ಸ್ವಾಗತಿಸಿದೆ.
ಟೆಲಿಗ್ರಾಮ್ನ ‘ಮೆಸೇಜ್ ಎಡಿಟಿಂಗ್’ ವೈಶಿಷ್ಟ್ಯವನ್ನು ಬಳಸಿ ಹಳೆಯ ಸಂದೇಶಗಳನ್ನು ತಿದ್ದಿ, ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ಲೀಕ್ ಆಗಿದೆ ಎಂಬಂತೆ ಸುಳ್ಳು ದಾಖಲೆ ಸೃಷ್ಟಿಸುವುದನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಟೆಲಿಗ್ರಾಮ್ ಚಾನೆಲ್ಗಳ ಮೂಲಕ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ನಕಲಿ ಪ್ರಶ್ನೆಪತ್ರಿಕೆ ಆಮಿಷ ಒಡ್ಡಿ ಹಣ ವಸೂಲಿ ಮಾಡುವ ಜಾಲಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.









