ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಆರೋಪ: ಯುಪಿ ಎಸ್‌ಐಟಿ ತನಿಖೆ ಚುರುಕು, 42 ಮಂದಿಯ ವಿಚಾರಣೆ



(ನ್ಯೂಸ್‌ ಕಡಬ) newskadaba.com,  ಜೂ.18 ಅಯೋಧ್ಯೆ: ರಾಮಮಂದಿರದ ದೇಣಿಗೆ ಲೂಟಿ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ದಳ ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಜೂನ್ 15ರಿಂದ ದೇವಾಲಯದಲ್ಲಿ ಬೀಡುಬಿಟ್ಟಿರುವ ಅಧಿಕಾರಿಗಳು, ಸತತ 3 ದಿನಗಳಿಂದ ರಾಮಮಂದಿರ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಟ್ಟು 42 ಜನರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ.







ತನಿಖಾ ತಂಡವು 2021ರಿಂದ ಈವರೆಗಿನ ಹಣಕಾಸು ದಾಖಲೆಗಳು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಹಾಗೂ ದೇಣಿಗೆ ವಿಭಾಗದ ಮುಖ್ಯಸ್ಥರ ಪೂರ್ವಾಪರವನ್ನು ಪರಾಮರ್ಶಿಸಿದೆ.ಮಂದಿರ ನಿರ್ಮಾಣ ಉಸ್ತುವಾರಿ ಗೋಪಾಲ್ ರಾವ್ ಅವರನ್ನು ವಿಚಾರಣೆಗೊಳಪಡಿಸಲಾಗಿದ್ದು, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಂದ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಾಗಿದೆ.






ಇತ್ತೀಚೆಗಷ್ಟೇ ಅಯೋಧ್ಯೆಯ ರುಡೌಲಿ ಪ್ರದೇಶದ ದೇವಾಲಯದ ನೌಕರನೊಬ್ಬನ ನಿವಾಸದಿಂದ ಪೊಲೀಸರು ₹10 ಲಕ್ಷದಿಂದ ₹12 ಲಕ್ಷದಷ್ಟು ನಗದನ್ನು ವಶಪಡಿಸಿಕೊಂಡಿದ್ದು, ತನಿಖೆಗೆ ಮಹತ್ವದ ತಿರುವು ನೀಡಿದೆ.ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ತನಿಖೆಗೆ ಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

2021ರ ಭೂ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ, ಈ ಆರೋಪವನ್ನು ತಳ್ಳಿಹಾಕಿದ್ದ ಟ್ರಸ್ಟ್, ಎಲ್ಲಾ ವ್ಯವಹಾರಗಳು ಪಾರದರ್ಶಕವಾಗಿವೆ ಎಂದಿತ್ತು. ಮತ್ತೊಂದೆಡೆ, ಸೈಬರ್ ವಂಚಕರು ನಕಲಿ ಕ್ಯೂಆರ್ ಕೋಡ್ ಹಾಗೂ ವೆಬ್‌ಸೈಟ್‌ಗಳ ಮೂಲಕ ಭಕ್ತರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

error: Content is protected !!
Scroll to Top