(ನ್ಯೂಸ್ ಕಡಬ) newskadaba.com,ಜೂ.20 ನವದೆಹಲಿ: ಕಳೆದ ಬಾರಿ ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಾಳೆ ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ..
ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಅಥವಾ ಭದ್ರತಾ ಲೋಪಗಳು ಉಂಟಾಗದಂತೆ ತಡೆಯಲು ಇಂದು ದೇಶದ 551 ನಗರಗಳಲ್ಲಿ ಅಣುಕು ಕಾರ್ಯಾಚರಣೆ ಆಯೋಜಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಸುರಕ್ಷಿತ ವಿತರಣೆ,ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳ ವ್ಯವಸ್ಥಿತ ಸಂಗ್ರಹಣೆ,ಕಂಟ್ರೋಲ್ ರೂಮ್ಗಳಿಗೆ ಉತ್ತರ ಪತ್ರಿಕೆಗಳ ಸುರಕ್ಷಿತ ಸಾಗಾಣಿಕೆ.
ನಾಳೆ ದೇಶಾದ್ಯಂತ ನಡೆಯಲಿರುವ ಮರುಪರೀಕ್ಷೆಗಾಗಿ 5,500ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಎಲ್ಲ ಕೇಂದ್ರಗಳಿಗೂ ಹೈ-ಅಲರ್ಟ್ ಘೋಷಿಸಲಾಗಿದೆ. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ದೇಶಾದ್ಯಂತ ಬೃಹತ್ ಪ್ರಮಾಣದ ಭದ್ರತಾ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ…..
ಪ್ರಶ್ನೆಪತ್ರಿಕೆಗಳ ಸಾಗಾಟ ಮತ್ತು ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸ್ಟ್ರಾಂಗ್ ರೂಮ್ಗಳಿಗೆ ತಲುಪಿಸುವ ಜವಾಬ್ದಾರಿಯನ್ನು ಸುಮಾರು 15,000 ಅರೆಸೇನಾ ಸಿಬ್ಬಂದಿಗೆ ವಹಿಸಲಾಗಿದೆ.ಡಿಜಿಟಲ್ ಮತ್ತು ತಾಂತ್ರಿಕ ಅಕ್ರಮಗಳಿಗೆ ಸಂಪೂರ್ಣ ಬ್ರೇಕ್ ಹಾಕಲು ಎನ್ಟಿಎ ಈ ಬಾರಿ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿದೆ. ಮೊಬೈಲ್ ಅಥವಾ ಇತರ ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ನಕಲು ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ 15,000 ಸಿಗ್ನಲ್ ಜಾಮರ್ಗಳನ್ನು ಅಳವಡಿಸಲಾಗಿದೆ.









