ರೈತರ ಖಾತೆಗೆ ಇಂದು ‘ಪಿಎಂ ಕಿಸಾನ್’ ಹಣ ಜಮೆ: 23ನೇ ಕಂತು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ



(ನ್ಯೂಸ್‌ ಕಡಬ) newskadaba.com,ಜೂ.20 ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗೆ ತಲಾ 2,000 ರೂಪಾಯಿಯಂತೆ ಒಟ್ಟು ₹18,880 ಕೋಟಿಗೂ ಅಧಿಕ ಹಣ ನೇರವಾಗಿ ಜಮೆಯಾಗಲಿದೆ.







ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ಶನಿವಾರ ಮಧ್ಯಾಹ್ನ 3:45 ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಕಂತು ಬಿಡುಗಡೆಯಾಗಲಿದೆ.ಪಶ್ಚಿಮ ಬಂಗಾಳದ ಸುಮಾರು 50 ಲಕ್ಷ ರೈತರು ಇದರ ಫಲಾನುಭವಿಗಳಾಗಿದ್ದು, ರಾಜ್ಯದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಸುಮಾರು ₹907 ಕೋಟಿ ತಲುಪಲಿದೆ.






ಇದೇ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ‘ಅಗ್ರಿ ಸ್ಟ್ಯಾಕ್’, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳಿಗೂ ಚಾಲನೆ ನೀಡಲಾಗುತ್ತದೆ.ಕಾರ್ಯಕ್ರಮದ  ನಂತರ ಪ್ರಧಾನಮಂತ್ರಿಯವರು ಹಲವು ರೈಲ್ವೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಬಂಗಾಳದ ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

error: Content is protected !!
Scroll to Top