(ನ್ಯೂಸ್ ಕಡಬ) newskadaba.com, ಜೂ.25 ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ತಮಗೆ ವಿಧಿಸಲಾಗಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಪ್ರತಿಯೊಬ್ಬರಿಗೂ ಇರುತ್ತದೆ. ಹೀಗಾಗಿ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಈ ಆದೇಶವನ್ನು ಬದಲಿಸಬೇಕು ಎಂದು ವಕೀಲರ ಮೂಲಕ ಮನವಿ ಮಾಡಿದ್ದಾರೆ.
ಒಂದು ವರ್ಷದವರೆಗೆ ಜಾಮೀನು ನಿರಾಕರಿಸುವುದರಿಂದ ವೈದ್ಯಕೀಯ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ.ದೀರ್ಘಾವಧಿಯ ಬಂಧನವು ಅವರ ವೃತ್ತಿಜೀವನ, ಜೀವನೋಪಾಯ ಮತ್ತು ಕುಟುಂಬದ ಮೇಲೆ ತೀವ್ರ ಪರಿಣಾಮ ಬೀರಿದೆ.ತಮ್ಮ ತಾಯಿಯವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ, ಕಾಲಕಾಲಕ್ಕೆ ಬಂಧನದ ಆದೇಶವನ್ನು ನ್ಯಾಯಾಲಯ ಪರಿಶೀಲಿಸಬೇಕು ಎಂದು ಕೋರಿದ್ದಾರೆ.









