ಅಲ್ಪಸಂಖ್ಯಾತರ ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 27. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP)ಯಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2 ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ. 2.50 ಲಕ್ಷ ಒಳಗಿರಬೇಕು. ಅರ್ಜಿಯನ್ನು ಎಸ್.ಎಸ್.ಪಿ ಪೋರ್ಟಲ್ https://ssp.postmatric.karnataka.gov.in ಅಡಿಯಲ್ಲಿ ಸಲ್ಲಿಸಬೇಕು. ಎಸ್.ಎಸ್.ಪಿ.ಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.
ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ ಎಸ್.ಎಸ್.ಪಿ  ಪೋರ್ಟಲ್ https://ssp.postmatric.karnataka.gov.in (ಸಹಾಯವಾಣಿ: 8277799990) ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top