(ನ್ಯೂಸ್ ಕಡಬ) newskadaba.com, ಜೂ.30: ಭಾರತದ ಚುನಾವಣಾ ಆಯೋಗವು ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ ಮತದಾರರ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ.
ಒಟ್ಟು 5.55 ಕೋಟಿ ಮತದಾರರ ಪೈಕಿ ಅಸಲಿ ಮತ್ತು ನಕಲಿ ಮತದಾರರನ್ನು ಗುರುತಿಸಿ, ಅನರ್ಹ ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಹೊಸ ಹೆಸರು ಸೇರ್ಪಡೆಗೆ ಅವಕಾಶವಿರಲಿದೆ.ಬಿಎಲ್‌ಓಗಳು ನೀಡುವ ಎಸ್‌ಐಆರ್ ಅರ್ಜಿಯಲ್ಲಿ ಮತದಾರರು ಮಾಹಿತಿ ಭರ್ತಿ ಮಾಡಿ ಸಹಿ ಮಾಡುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ.
ಅಕ್ಟೋಬರ್ 7, 2026 ಕ್ಕೆ 18 ವರ್ಷ ತುಂಬುವ ಯುವಕ/ಯುವತಿಯರು ಹೊಸದಾಗಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದಾಗಿದೆ.ರಾಜ್ಯ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತಗಳು ಈ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ.









