ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com ಕಡಬ, ಜೂ. 30. ತಾಲೂಕಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಜರಗಿತು.







ಪ್ರಸಕ್ತ ಸಾಲಿನಲ್ಲಿ ಸಂಸ್ಥೆಗೆ ದಾಖಲಾದ ಮಕ್ಕಳಿಗೆ ಮಾತಾಜಿಯವರಿಂದ ಆರತಿ, ಮಕ್ಕಳಿಂದ ಘೃತಾಹುತಿ, ಭಾರತಮಾತೆಗೆ ಪುಷ್ಪಾರ್ಚನೆ ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರಿಂದ ತಿಲಕಧಾರಣೆ, ಸಿಹಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು.






ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯು.ಆರ್. ಪ್ರೋಪರ್ಟಿಸ್ ಪುತ್ತೂರು ಇದರ ಸಂಸ್ಥಾಪಕರಾದ ಶ್ರೀ ಉಜ್ವಲ್ ಪ್ರಭು ಇವರು ವಿದ್ಯಾರ್ಥಿಗಳಿಗೆ ಕೇವಲ ಅಂಕ ಗಳಿಕೆ ಮಾತ್ರ ಮುಖ್ಯವಲ್ಲ, ಅದರ ಜೊತೆಗೆ ಸಂಸ್ಕಾರಯುತ ಶಿಕ್ಷಣವು ಅಗತ್ಯ. ಇದರಿಂದ ತಮ್ಮ ಜೀವನದಲ್ಲಿ ಸಮಾಜದಲ್ಲಿ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಬದುಕಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಬೇಕು. ಹಿಂದೂ ಧರ್ಮ, ಸಂಸ್ಕೃತಿಯನ್ನು ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಇಂತಹ ಕಾರ್ಯವನ್ನು ಸರಸ್ವತೀ ವಿದ್ಯಾಸಂಸ್ಥೆಯು ಮಾಡುತ್ತಿದೆ ಎಂದರು.

 

ವೇದಿಕೆಯಲ್ಲಿ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಉಪ ಅರಣ್ಯಾಧಿಕಾರಿ ಶ್ರೀ ಹರೀಶ್ ಗೌಡ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ, ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್, ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ ಹಾಗೂ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ವಸಂತ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕೃತಿಕ್ ಸ್ವಾಗತಿಸಿ, ಹವನ್ ಎ.ವೈ. ವಂದಿಸಿದರು. ಕುಮಾರಿ ಭವಿಷ್ಯ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top