ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 30. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.







ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ






ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ.

 

ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಸಂಪರ್ಕಿಸಿ ಆನ್‍ಲೈನ್‍ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.

ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಂಖಾತರ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದು ಎಂದು  ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top