(ನ್ಯೂಸ್ ಕಡಬ) newskadaba.com, ಜು.02 ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ (‘ಆಪರೇಷನ್ ಗೃಹಜ್ಯೋತಿ’) ಮೀಟರ್ ರೀಡರ್ಗಳನ್ನು ನಿಯೋಜಿಸಿರುವುದರಿಂದ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ.
ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅನರ್ಹರನ್ನು ಫಿಲ್ಟರ್ ಮಾಡಲು ಮತ್ತು ಅರ್ಹ ಫಲಾನುಭವಿಗಳನ್ನು ಪರಿಶೀಲಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಕೆಳಗಿನ ಗ್ರಾಹಕರಿಗೆ ಈ ಹೊಸ ನಿಯಮ ಅನ್ವಯಿಸುವುದಿಲ್ಲ, ಇವರಿಗೆ ಎಂದಿನಂತೆ ನಿಯಮಿತ ಮೀಟರ್ ರೀಡಿಂಗ್ ಮೂಲಕವೇ ಬಿಲ್ ನೀಡಲಾಗುವುದು:
- ಹೆಚ್.ಟಿ (HT) ಗ್ರಾಹಕರು.
- 40 ಹೆಚ್.ಪಿ ಹಾಗೂ ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ (LT) ಗ್ರಾಹಕರು.
- ಸೋಲಾರ್ ರೂಫ್ಟಾಪ್ ಗ್ರಾಹಕರು.
- ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರು.









