(ನ್ಯೂಸ್ ಕಡಬ) newskadaba.com ಜು. 02. ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪೊಂದನ್ನು ನೀಡಿದ್ದು, ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ ಮಗುವಿನ ಸುರಕ್ಷತೆಯ ಜವಾಬ್ದಾರಿ; ಮಗು ಬಸ್ ಹತ್ತಿದಾಗಿನಿಂದ ಸಂಜೆ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿಯದ್ದೇ ಎಂದು ಹೇಳಿದೆ.
ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಮೇಲಿನ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಖಾಸಗಿ ಶಾಲೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ ಈ ಆದೇಶ ಹೊರಡಿಸಿದೆ.













