ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ



(ನ್ಯೂಸ್ ಕಡಬ) newskadaba.com ಜು. 02. ಸರಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಕುರಿತು ಶಿವಮೊಗ್ಗದಿಂದ ವರದಿಯಾಗಿದೆ.







ಶಿವಮೊಗ್ಗ ಮೂಲದ ಸಚಿನ್ ಮತ್ತು ಸುಜಾತ ಎಂಬವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದಾಗಿ ತಿಳಿದುಬಂದಿದೆ.






ವರದಿಯ ಪ್ರಕಾರ, ಆರೋಪಿಗಳು ಶಿವಮೊಗ್ಗದಲ್ಲಿ ಉದ್ಯೋಗ ತರಬೇತಿ ಕೇಂದ್ರ ತೆರೆದು, ಕೋಚಿಂಗ್ ಸೆಂಟರ್‌ಗಳ ಮೂಲಕ ನಕಲಿ ಪರೀಕ್ಷೆಗಳನ್ನು ನಡೆಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಅಭ್ಯರ್ಥಿಗಳಿಂದ ತಲಾ 3.5 ಲಕ್ಷದಿಂದ 10 ಲಕ್ಷ ರೂಪಾಯಿವರೆಗೆ ಹಣ ಪಡೆದು, ಒಟ್ಟು 2 ಕೋಟಿಗೂ ಅಧಿಕ ಮೊತ್ತ ವಂಚಿಸಿದ್ದಾರೆ.

ಆರೋಪಿಗಳು ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ ನಕಲಿ ನೇಮಕಾತಿ ಪತ್ರಗಳನ್ನು ನೀಡಿ ಅಭ್ಯರ್ಥಿಗಳನ್ನು ನಂಬಿಸುತ್ತಿದ್ದರು. ವಂಚನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಿವಮೊಗ್ಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top