(ನ್ಯೂಸ್ ಕಡಬ) newskadaba.com, ಜು.03: ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅವಳಿ ಭೂಕಂಪ ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಅವಳಿ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 2,595ಕ್ಕೆ ಏರಿಕೆಯಾಗಿದೆ ಎಂದು ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅಧಿಕೃತವಾಗಿ ತಿಳಿಸಿದ್ದಾರೆ.ದುರಂತದಲ್ಲಿ 11,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ. ಕುಸಿದಿರುವ ಕಟ್ಟಡಗಳ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗುತ್ತಿದೆ.
ಮೃತರ ಗೌರವಾರ್ಥವಾಗಿ ಯಾವುದೇ ಸಾಮೂಹಿಕ ಸಮಾಧಿಗಳನ್ನು ನಿರ್ಮಿಸುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ವೆನೆಜುವೆಲಾದ ಪುನರ್ನಿರ್ಮಾಣ ಕಾರ್ಯಕ್ಕಾಗಿ 31 ದೇಶಗಳು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳು ಬೆಂಬಲ ನೀಡುತ್ತಿವೆ.
ವಿಶ್ವ ಬ್ಯಾಂಕ್ ಹಾಗೂ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಧನಸಹಾಯ ನೀಡಲು ಮುಂದೆ ಬಂದಿದ್ದು, ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 200 ಮಿಲಿಯನ್ ಡಾಲರ್ (ಸುಮಾರು 1,904 ಕೋಟಿ ರೂ.) ಮೊತ್ತದ ವಿಶೇಷ ಪುನರ್ನಿರ್ಮಾಣ ನಿಧಿಯನ್ನು ಸ್ಥಾಪಿಸಲಾಗುತ್ತಿದೆ.
-
ವಿಶೇಷ ನಿಧಿ ಸ್ಥಾಪನೆ: ವಿಶ್ವ ಬ್ಯಾಂಕ್ ಹಾಗೂ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಧನಸಹಾಯ ನೀಡಲು ಮುಂದೆ ಬಂದಿದ್ದು, ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 200 ಮಿಲಿಯನ್ ಡಾಲರ್ (ಸುಮಾರು 1,904 ಕೋಟಿ ರೂ.) ಮೊತ್ತದ ವಿಶೇಷ ಪುನರ್ನಿರ್ಮಾಣ ನಿಧಿಯನ್ನು ಸ್ಥಾಪಿಸಲಾಗುತ್ತಿದೆ.







