(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಪಿ.ಎಂ.ಎ.ಜೆ.ಎ.ವೈ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೊಕೆಮಿಕಲ್ಸ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಸಿ.ಐ.ಪಿ.ಇ.ಟಿ) ಮೈಸೂರು ಸಂಸ್ಥೆಯಲ್ಲಿ “ಸಹಾಯಕ ಮೆಷಿನ್ ಆಪರೇಟರ್ – ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್” ಮತ್ತು ಸಹಾಯಕ ಮೆಷಿನ್ ಆಪರೇಟರ್ – ಇಂಜೆಕ್ಷನ್ ಮೌಲ್ದಿಂಗ್” ವಿಷಯಗಳಲ್ಲಿ 3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಜುಲೈ 6 ರಿಂದ ಆಯೋಜಿಸಲಾಗಿದೆ. ಈ ತರಬೇತಿಗೆ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಯಾವುದೇ ಪದವಿ ಪಡೆದ 18 ರಿಂದ 35 ವರ್ಷದೊಳಗಿನ ಭಾಗವಹಿಸಬಹುದು. ಈ ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶದ ಖಚಿತತೆ ನೀಡಲಾಗುತ್ತದೆ. ತಾಂತ್ರಿಕ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಯುವಜನರಿಗೆ ಅತ್ಯುತ್ತಮ ಅವಕಾಶವಾಗಿದೆ.
ಹೆಚ್ಚಿನ ಮಾಹಿತಿಗೆ ಮೈಸೂರು ಹೆಬ್ಬಾಳ ಕೈಗಾರಿಕಾ ಪ್ರದೇಶದ ಸಿ.ಐ.ಪಿ.ಇ.ಟಿ (ದೂರವಾಣಿ: 9483431968/ 9739196375 ಅಥವಾ ವೆಬ್ಸೈಟ್ www.cipet.gov.in.) ಸಂಪರ್ಕಿಸಬಹುದು ಎಂದು ಸಿ.ಐ.ಪಿ.ಇ.ಟಿ ಸಂಸ್ಥೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









