(ನ್ಯೂಸ್ ಕಡಬ) newskadaba.com,ಜು.06 : ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ (ಪಾಣೆಮಂಗಳೂರು-ಮೆಲ್ಕಾರ್ ರಸ್ತೆ) ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ, ಪುತ್ತೂರು ನಿವಾಸಿ ಅಶೋಕ್ (34) ದಾರುಣವಾಗಿ ಮೃತಪಟ್ಟಿದ್ದಾರೆ.
ಬಿ.ಸಿ. ರೋಡ್ ಕಡೆಗೆ ಚಲಿಸುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಒನ್-ವೇ ನಿಯಮ ಉಲ್ಲಂಘಿಸಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಅಪಘಾತದಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.









