ಕೃತಕವಾಗಿ ಚಿನ್ನದ ತೂಕ ಹೆಚ್ಚಿಸಿ ವಂಚಿಸಲು ಸ್ಕೆಚ್: ಕಡಬ ಪೊಲೀಸರ ಜಾಲಕ್ಕೆ ಬಿದ್ದ ಆರೋಪಿಗಳು



(ನ್ಯೂಸ್‌ ಕಡಬ) newskadaba.com,ಜು.06  : ನಕಲಿ ಅಥವಾ ಕಡಿಮೆ ಗುಣಮಟ್ಟದ ಆಭರಣಗಳ ತೂಕ ಹೆಚ್ಚಿಸಿ, ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ.







ಜುಲೈ 3ರಂದು ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಈ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಡಲು ಬಂದಿರುವುದಾಗಿ ತಿಳಿಸಿದ್ದರು.






ಚಿನ್ನದ ಆಭರಣಗಳಿಗೆ ಯಾವುದೇ ಸೂಕ್ತ ದಾಖಲೆ ಇಲ್ಲದಿದ್ದ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ಆಭರಣಗಳ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ಗೆ ವಂಚಿಸಿ ಹಣ ಪಡೆಯಲು ಬಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.ಪ್ರಸ್ತುತ ಕಡಬ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS-2023) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

error: Content is protected !!
Scroll to Top