ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ



(ನ್ಯೂಸ್‌ ಕಡಬ) newskadaba.com,  ಜು.07 : ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.”ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ, ಇಂತಹ ನಡವಳಿಕೆಯನ್ನು ನ್ಯಾಯಾಲಯ ಎಂದಿಗೂ ಸಹಿಸುವುದಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.







ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿಯ ತಾಯಿ ಶ್ರಫೀನಾ ಎಂಬುವರು, ಶಿಕ್ಷಕಿ ಆಶಾ ಕ್ರಾಸ್ತಾ ಅವರು ತಮ್ಮ 6 ವರ್ಷದ ಮಗಳಿಗೆ ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು 2026ರ ಜನವರಿ 31ರಂದು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.






ದೂರಿನ ಅನ್ವಯ ಪೊಲೀಸರು ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 (ಮಕ್ಕಳ ಮೇಲಿನ ಕ್ರೌರ್ಯ) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 118(1) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ, ಮಂಗಳೂರಿನ 2ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ಈ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕೋರಿ ಶಿಕ್ಷಕಿ ಆಶಾ ಕ್ರಾಸ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

error: Content is protected !!
Scroll to Top