(ನ್ಯೂಸ್ ಕಡಬ) newskadaba.com ಜು. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.









