ಕಲಬುರಗಿ: ಪೊಲೀಸ್ ವಾಹನದಲ್ಲೇ ಸೇವಾ ರೈಫಲ್‌ನಿಂದ ಶೂಟ್ ಮಾಡಿಕೊಂಡು CAR ಕಾನ್‌ಸ್ಟೇಬಲ್ ಆತ್ಮಹತ್ಯೆ



(ನ್ಯೂಸ್‌ ಕಡಬ) newskadaba.com,  ಜು.08 : ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪಡೆಯ (CAR) ಪೊಲೀಸ್ ಕಾನ್ಸ್‌ಟೇಬಲ್ ಶಿವಕುಮಾರ ನರಿಬೋಳ (32) ಅವರು ಮಂಗಳವಾರ ರಾತ್ರಿ ಪೊಲೀಸ್ ವಾಹನದಲ್ಲಿ ಕುಳಿತಿದ್ದಾಗ ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.







ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದವರಾದ ಇವರು 2016 ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿದ್ದ ಇವರು, ಇತ್ತೀಚೆಗಷ್ಟೇ (ಫೆಬ್ರವರಿ 2026) ಕಲಬುರಗಿಗೆ ವರ್ಗಾವಣೆಯಾಗಿದ್ದರು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.






ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿಧಿವಿಜ್ಞಾನ (FSL) ಮತ್ತು ಬ್ಯಾಲಿಸ್ಟಿಕ್ ತಂಡಗಳು ಸಾಕ್ಷ್ಯ ಸಂಗ್ರಹಿಸಿವೆ.ಪ್ರಾಥಮಿಕ ತನಿಖೆಯ ಪ್ರಕಾರ, ಮೃತರು ಕಳೆದ ಕೆಲವು ದಿನಗಳಿಂದ ವೈಯಕ್ತಿಕ ಕಾರಣಗಳಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಕುಟುಂಬಸ್ಥರ ದೂರಿನ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

error: Content is protected !!
Scroll to Top