ರಾಜ್ಯದ ಎಲ್ಲಾ ಎಪಿಎಲ್ ಕಾರ್ಡ್‌ದಾರರಿಗೂ ಶೀಘ್ರದಲ್ಲೇ ಆಯುಷ್ಮಾನ್ ಆರೋಗ್ಯ ಯೋಜನೆ ವಿಸ್ತರಣೆ: ಸಚಿವ ಯು.ಟಿ.ಖಾದರ್



(ನ್ಯೂಸ್‌ ಕಡಬ) newskadaba.com,  ಜು.09  ಸುಳ್ಯ: ರಾಜ್ಯದ ಎಲ್ಲಾ ಎಪಿಎಲ್ (APL) ಕಾರ್ಡ್‌ದಾರರಿಗೂ ಶೀಘ್ರದಲ್ಲೇ ಆಯುಷ್ಮಾನ್ ಆರೋಗ್ಯ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಪ್ರಕಟಿಸಿದ್ದಾರೆ. “ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರವಿರುವಾಗ ಜಾತಿ, ಧರ್ಮ ಹಾಗೂ ಪಕ್ಷ ರಹಿತವಾಗಿ ಪ್ರಾಮಾಣಿಕವಾಗಿ ಜನಸೇವೆ ಮಾಡುವುದೇ ನಿಜವಾದ ಸೇವೆ” ಎಂದು ಅವರು ಈ ಸಂದರ್ಭದಲ್ಲಿ ಮಾರ್ಮಿಕವಾಗಿ ನುಡಿದರು.







ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, ಸುಳ್ಯ ತಾಲೂಕು ಅರಣ್ಯ ಪ್ರದೇಶದಿಂದ ಆವೃತವಾಗಿರುವುದರಿಂದ ಎದುರಿಸುತ್ತಿರುವ ಗ್ರಾಮೀಣ ರಸ್ತೆ ಅಭಿವೃದ್ಧಿ ಸಮಸ್ಯೆಗಳು, ಅಡಕೆ ಹಳದಿ ಮತ್ತು ಎಲೆಚುಕ್ಕಿ ರೋಗ, ವೈದ್ಯರ ನೇಮಕಾತಿ ಹಾಗೂ ನಿವೇಶನ ರಹಿತರ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಈ ಎಲ್ಲಾ ಸವಾಲುಗಳ ನಿವಾರಣೆಗೆ ಸುಳ್ಯ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಸಚಿವರಿಗೆ ಮನವಿ ಮಾಡಿದರು.






ಕುಕ್ಕೆ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ಯು.ಟಿ.ಖಾದರ್ ಅವರ ಸರಳತೆ, ದಕ್ಷತೆ ಹಾಗೂ ಜಾತ್ಯತೀತ ವ್ಯಕ್ತಿತ್ವವನ್ನು ಶ್ಲಾಘಿಸಿದರು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ಧರ್ಮಗುರುಗಳು, ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!
Scroll to Top