(ನ್ಯೂಸ್ ಕಡಬ) newskadaba.com, ಜು.10 : ಮುಂಬರುವ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗಿ ಸಮುದ್ರ ತೀರ ಹಾಗೂ ತಗ್ಗು ಪ್ರದೇಶದ ಜನರಿಗೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ.









