(ನ್ಯೂಸ್ ಕಡಬ) newskadaba.com, ಜು.10 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಚಾರಣಾಧೀನ ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್.
ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ಹಠಾತ್ ತಪಾಸಣೆ ನಡೆಸಲಾಗಿತ್ತು.
ಈ ಸಂದರ್ಭದಲ್ಲಿ ಕೊಠಡಿಯಲ್ಲಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.ನಿಯಮ ಉಲ್ಲಂಘಿಸಿ ಮೊಬೈಲ್ ಹೊಂದಿದ್ದ ಕೈದಿಗಳ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.









