ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು

(ನ್ಯೂಸ್ಕಡಬ) newskadaba.com,  ಜು.10  ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಸುಬ್ರಹ್ಮಣ್ಯದ ವಸತಿಗೃಹ (ಲಾಡ್ಜ್) ಒಂದರಲ್ಲಿ ನಿನ್ನೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷೇತ್ರದ ದೇವರ ಗದ್ದೆಗೆ ಹೋಗುವ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹೊರಗಿನಿಂದ ಬಂದ ಯಾತ್ರಿಕರೆನ್ನಲಾಗಿದ್ದು, ತಂಗಿದ್ದ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Scroll to Top