ಗ್ಯಾರಂಟಿ ಯೋಜನೆ ಮರುಪರಿಶೀಲನೆ: ಅಧಿಕಾರಿಗಳ ಮನೆ ಭೇಟಿ ವೇಳೆ ವೋಟರ್ ಐಡಿ ಕಡ್ಡಾಯ



(ನ್ಯೂಸ್‌ ಕಡಬ) newskadaba.com,  ಜು.11 : ಮುಂದಿನ ಎರಡು-ಮೂರು ದಿನಗಳಲ್ಲಿ ಒಟ್ಟು ₹62.56 ಕೋಟಿಗೂ ಅಧಿಕ ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ತಿಳಿಸಿದ್ದಾರೆ.







ಒಂದೇ ಫಲಾನುಭವಿ ಹಲವು ಖಾತೆಗಳನ್ನು ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ 26,986 ಖಾತೆಗಳನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ಲೋಪದೋಷ ಅಥವಾ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಕಂಡುಬಂದಿಲ್ಲ. ಹೀಗಾಗಿ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ.ಅರ್ಹತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ. ಪರಿಶೀಲನೆಗೆ ಬರುವ ಅಧಿಕಾರಿಗಳಿಗೆ ಗ್ರಾಹಕರು ಕಡ್ಡಾಯವಾಗಿ ವೋಟರ್ ಐಡಿ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು.






ಮರುಪರಿಶೀಲನೆ ವೇಳೆ ಅಗತ್ಯ ದಾಖಲೆಗಳನ್ನು ನೀಡಲು ನಿರಾಕರಿಸುವ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯುವುದು ಕಷ್ಟವಾಗಬಹುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಸದ್ಯ ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ಪರಿಶೀಲನಾ ಕಾರ್ಯ ಕೆಲವೆಡೆ ನಿಧಾನವಾಗಿದ್ದು, ಮುಂಬರುವ ದಿನಗಳಲ್ಲಿ ಇದನ್ನು ಚುರುಕುಗೊಳಿಸಿ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು.

error: Content is protected !!
Scroll to Top