ನ್ಯಾಯಾಲಯಕ್ಕೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ



(ನ್ಯೂಸ್‌ ಕಡಬ) newskadaba.com,  ಜು.13  ಮಂಗಳೂರು: ನ್ಯಾಯಾಲಯದಿಂದ ಸತತ 14 ಬಾರಿ ಬಂಧನ ವಾರೆಂಟ್ ಹೊರಡಿಸಲಾಗಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿಯಾಗಿದ್ದಾನೆ.







2024ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಈತ, ಕಳೆದ ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಯ ವಿರುದ್ಧ 14 ಬಾರಿ ದಸ್ತಗಿರಿ ವಾರೆಂಟ್ \ಹೊರಡಿಸಿತ್ತು






ಆರೋಪಿಯ ಚಲನವಲನದ ಕುರಿತು ಲಭ್ಯವಾದ ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಕಂಕನಾಡಿ ನಗರ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು, ಜುಲೈ 11ರಂದು ಬಾಳೆಹೊನ್ನೂರು ಸಮೀಪದ ಮಲ್ಲಿಗೇಹಳ್ಳಿ ಮೈದಾಳು ಎಂಬಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

error: Content is protected !!
Scroll to Top