ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ



(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.







ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ.






ಫಲಾನುಭವಿಗಳು ಇಂತಹ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ಹಣ ಹಾಗೂ ಸಮಯ ವ್ಯಯಿಸಿ ತೊಂದರೆಗೆ ಒಳಗಾಗಬಾರದು ಎಂದು ಸಾರ್ವಜನಿಕರಲ್ಲಿ ಅಧಿಕೃತವಾಗಿ ಮನವಿ ಮಾಡಲಾಗಿದೆ.

error: Content is protected !!
Scroll to Top