(ನ್ಯೂಸ್ ಕಡಬ) newskadaba.com, ಜು.14 : ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಸುರ್ಮೋ ಎಂಬಾತನನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದನು.
ಹಲವು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದಿಂದ ವಾರಂಟ್ಗಳು ಜಾರಿಯಾಗಿದ್ದರೂ, ಈತ ಕೋರ್ಟ್ಗೆ ಹಾಜರಾಗದೆ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಸಂಚರಿಸುತ್ತಿದ್ದನು
ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.









