ಮಿಕ್ಸರ್ ತಿನ್ನುವಾಗ ಕಡಲೆಕಾಯಿ ಗಂಟಲಿಗೆ ಸಿಲುಕಿ ಮೂರು ವರ್ಷದ ಮಗು ಮೃತ್ಯು!!



(ನ್ಯೂಸ್ ಕಡಬ) newskadaba.com ಜು. 15. ಮನೆಯಲ್ಲಿ ಮಿಕ್ಸರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ನಡೆದಿದೆ.







ಬಾಲಕ ಮಿಕ್ಸರ್ ತಿನ್ನುತ್ತಿದ್ದಾಗ ಆಕಸ್ಮಿಕವಾಗಿ ಕಡಲೆಕಾಯಿ ಗಂಟಲಿಗೆ ಸಿಲುಕಿದ್ದು, ತಕ್ಷಣವೇ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದೆ.






error: Content is protected !!
Scroll to Top