ರಾಮ ಮಂದಿರದ ಹುಂಡಿ ಕಳವು ಪ್ರಕರಣ: ರಾಮ ಭಕ್ತರ ನಂಬಿಕೆಗೆ ಆಘಾತ – ವಿನಯ್ ಕುಮಾರ್ ಸೊರಕೆ



(ನ್ಯೂಸ್‌ ಕಡಬ) newskadaba.com,  ಜು.16 ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್, ವಿಎಚ್‌ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.







ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ನೇಮಿಸಿದ ಟ್ರಸ್ಟಿಗಳಿಂದಲೇ ಈ ಕಳವು ನಡೆದಿದ್ದರೂ, ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳು ಮೌನ ವಹಿಸಿವೆ ಎಂದು ಅವರು ವ್ಯಂಗ್ಯವಾಡಿದರು.ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ದೃಷ್ಟಿಯಿಂದ ಪ್ರಚಾರ ಸಮಿತಿಯು ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಕ್ರಿಯವಾಗಬೇಕಿದೆ. ಸರ್ಕಾರದ ಜನಪರ ಯೋಜನೆಗಳು ಹಾಗೂ ಐದು ಗ್ಯಾರಂಟಿಗಳನ್ನು






ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಹುಂಡಿ ಕದ್ದವರು ಮತದಾರರ ಹಕ್ಕನ್ನು ಕದಿಯುವ ಸಾಧ್ಯತೆಯಿರುವುದರಿಂದ ‘ಜಾಗೃತರಾಗಿ’ ಎಂಬ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು. ದೇವಸ್ಥಾನದ ನಗದು, ಚಿನ್ನಾಭರಣ ಲೂಟಿ ಮಾಡಿರುವ ಬಗ್ಗೆ ಬಿಜೆಪಿ ನಾಯಕರ ಮೌನವನ್ನು ಅವರು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಪ್ರಚಾರ ಸಮಿತಿಯ ವಿಧಾನಸಭಾ ಹಾಗೂ ಬ್ಲಾಕ್ ಮಟ್ಟದ ನೂತನ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಹಿಸಿದ್ದರು. ಮಾಜಿ ಶಾಸಕ ಜೆ.ಆರ್. ಲೋಬೊ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

error: Content is protected !!
Scroll to Top